ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,66,161 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,26,62,575ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,754 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,46,116ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,26,62,575 ಮಂದಿ ಸೋಂಕಿತರ ಪೈಕಿ ಈವರೆಗೆ 1,86,71,222 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










