ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,556 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,03,16,897ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 907 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,97,637ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,03,16,897 ಮಂದಿ ಸೋಂಕಿತರ ಪೈಕಿ ಈವರೆಗೆ 2,93,66,601 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










