ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,593 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,25,12,366ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 648 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,35,758ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,25,12,366 ಮಂದಿ ಸೋಂಕಿತರ ಪೈಕಿ ಈವರೆಗೆ 3,17,54,281 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










