ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,164 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,11,44,229ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 499 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,14,108ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,11,44,229 ಮಂದಿ ಸೋಂಕಿತರ ಪೈಕಿ ಈವರೆಗೆ 3,03,08,456 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










