ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,353 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,20,36,511ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 497 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,29,179ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,20,36,511 ಮಂದಿ ಸೋಂಕಿತರ ಪೈಕಿ ಈವರೆಗೆ 3,12,20,981 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










