ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,792 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,09,46,074ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 624 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,11,408ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,09,46,074 ಮಂದಿ ಸೋಂಕಿತರ ಪೈಕಿ ಈವರೆಗೆ 3,01,04,720 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










