ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39,097 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 546 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,20,016ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,13,32,159 ಮಂದಿ ಸೋಂಕಿತರ ಪೈಕಿ ಈವರೆಗೆ 3,05,03,166 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










