ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,715 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,16,86,796ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 199 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,60,166ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,16,86,796 ಮಂದಿ ಸೋಂಕಿತರ ಪೈಕಿ ಈವರೆಗೆ 1,11,81,253 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










