ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 41,806 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,09,87,880ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 581 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,11,989ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,09,87,880 ಮಂದಿ ಸೋಂಕಿತರ ಪೈಕಿ ಈವರೆಗೆ 3,01,43,850 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










