ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,618 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,29,45,907ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 330 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,29,45,907 ಮಂದಿ ಸೋಂಕಿತರ ಪೈಕಿ ಈವರೆಗೆ 3,21,00,001 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










