ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,640 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,99,77,861ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,167 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,89,302 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,99,77,861 ಮಂದಿ ಸೋಂಕಿತರ ಪೈಕಿ ಈವರೆಗೆ 2,89,26,038 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










