ದೇಶದಲ್ಲಿ 4,518 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,31,81,335ಕ್ಕೆ ಏರಿಕೆ…

61
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,518 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,31,81,335ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 9 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,24,701ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,31,81,335 ಮಂದಿ ಸೋಂಕಿತರ ಪೈಕಿ ಈವರೆಗೆ 4,26,30,852 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.