ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 456 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,780ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,89,968 ಮಂದಿ ಸೋಂಕಿತರ ಪೈಕಿ ಈವರೆಗೆ 4,41,55,782 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










