ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,97,583ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ ಶೂನ್ಯ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,32,024ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,97,583 ಮಂದಿ ಸೋಂಕಿತರ ಪೈಕಿ ಈವರೆಗೆ 4,44,65,074 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










