ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,759 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 509 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,37,370ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,26,49,947 ಮಂದಿ ಸೋಂಕಿತರ ಪೈಕಿ ಈವರೆಗೆ 3,18,52,802 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










