ದೇಶದಲ್ಲಿ 46,951 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,16,46,081ಕ್ಕೆ ಏರಿಕೆ…

126
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,951 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,16,46,081ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 212 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,59,967ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,16,46,081 ಮಂದಿ ಸೋಂಕಿತರ ಪೈಕಿ ಈವರೆಗೆ 1,11,51,468 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.