ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47,092 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 509 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,39,529ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,28,57,937 ಮಂದಿ ಸೋಂಕಿತರ ಪೈಕಿ ಈವರೆಗೆ 3,20,28,825 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










