ದೇಶದಲ್ಲಿ 5,335 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,39,054ಕ್ಕೆ ಏರಿಕೆ…

45
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,335 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,39,054ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 530929ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,47,39,054 ಮಂದಿ ಸೋಂಕಿತರ ಪೈಕಿ ಈವರೆಗೆ 4,41,82,538 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.