ದೇಶದಲ್ಲಿ 54,069 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,00,82,778ಕ್ಕೆ ಏರಿಕೆ…

113
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,069 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,00,82,778ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,321 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,91,981 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,00,82,778 ಮಂದಿ ಸೋಂಕಿತರ ಪೈಕಿ ಈವರೆಗೆ 2,90,63,740 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.