ದೇಶದಲ್ಲಿ 5,676 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,68,172 ಕ್ಕೆ ಏರಿಕೆ…

61
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,676 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,68,172 ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 21 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,000 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,47,68,172 ಮಂದಿ ಸೋಂಕಿತರ ಪೈಕಿ ಈವರೆಗೆ 4,42,00,079 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.