ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 58,097 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,50,18,358ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 534 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,82,551ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,50,18,358 ಮಂದಿ ಸೋಂಕಿತರ ಪೈಕಿ ಈವರೆಗೆ 3,43,21,803 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










