ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 618 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,91,956ಕ್ಕೆ ಏರಿಕೆಯಾಗಿದೆ. ನಿನ್ನೆ ಐದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,789ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,91,956 ಮಂದಿ ಸೋಂಕಿತರ ಪೈಕಿ ಈವರೆಗೆ 4,41,56,970 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










