ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62,258 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,19,08,910ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 291 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,61,240ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,19,08,910 ಮಂದಿ ಸೋಂಕಿತರ ಪೈಕಿ ಈವರೆಗೆ 1,12,95,023 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










