ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 625 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,62,141ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಸದ್ಯ ಮೃತರ ಸಂಖ್ಯೆ 5,30,509 ರಷ್ಟಿದೆ. ಏರಿಕೆಯಾಗಿದೆ. ದೇಶದಲ್ಲಿ 4,46,62,141 ಮಂದಿ ಸೋಂಕಿತರ ಪೈಕಿ ಈವರೆಗೆ 4,41,17,611 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










