ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 65 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,784ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,740ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,784 ಮಂದಿ ಸೋಂಕಿತರ ಪೈಕಿ ಈವರೆಗೆ 4,41,50,289 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










