ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,208 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,97,00,313ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,330 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,81,903 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,97,00,313 ಮಂದಿ ಸೋಂಕಿತರ ಪೈಕಿ ಈವರೆಗೆ 2,84,91,670 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










