ದೇಶದಲ್ಲಿ 7,591 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,44,15,723ಕ್ಕೆ ಏರಿಕೆ…

101
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,591 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,44,15,723ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 45 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,27,799ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,44,15,723 ಮಂದಿ ಸೋಂಕಿತರ ಪೈಕಿ ಈವರೆಗೆ 4,38,02,993 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.