ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 796 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,36,928ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 19 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,21,710ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,30,36,928 ಮಂದಿ ಸೋಂಕಿತರ ಪೈಕಿ ಈವರೆಗೆ 4,25,04,329 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










