ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 830 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,45,768ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಸದ್ಯ ಮೃತರ ಸಂಖ್ಯೆ 5,28,980ಕ್ಕೆ ಇದೆ. ದೇಶದಲ್ಲಿ 4,46,45,768 ಮಂದಿ ಸೋಂಕಿತರ ಪೈಕಿ ಈವರೆಗೆ 4,40,95,180 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










