ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,488 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,45,18,901ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 249 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,65,911ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,45,18,901 ಮಂದಿ ಸೋಂಕಿತರ ಪೈಕಿ ಈವರೆಗೆ 3,39,34,547 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










