ದೇಶದಲ್ಲಿ 8,503 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,46,74,744ಕ್ಕೆ ಏರಿಕೆ…

64
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,46,74,744ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 624 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,74,735ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,46,74,744 ಮಂದಿ ಸೋಂಕಿತರ ಪೈಕಿ ಈವರೆಗೆ 3,41,05,066 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.