ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,50,32,870ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,33,525ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,50,32,870 ಮಂದಿ ಸೋಂಕಿತರ ಪೈಕಿ ಈವರೆಗೆ 4,44,98,236 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










