ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,121 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,09,25,710ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 81 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,55,813ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,09,25,710 ಮಂದಿ ಸೋಂಕಿತರ ಪೈಕಿ ಈವರೆಗೆ 1,06,33,025 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಆರೋಗ್ಯ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.










