ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 91,702 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,92,74,823ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,403 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,63,079 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,92,74,823 ಮಂದಿ ಸೋಂಕಿತರ ಪೈಕಿ ಈವರೆಗೆ 2,77,90,073 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










