ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 918 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,96,338ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,30,806ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,96,338 ಮಂದಿ ಸೋಂಕಿತರ ಪೈಕಿ ಈವರೆಗೆ 4,41,59,182 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.