ದೇಶದಲ್ಲಿ 949 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,30,39,972ಕ್ಕೆ ಏರಿಕೆ…

55
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 949 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,30,39,972ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 6 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,21,743ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,30,39,972 ಮಂದಿ ಸೋಂಕಿತರ ಪೈಕಿ ಈವರೆಗೆ 4,25,07,038 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.