ದೇಶದಲ್ಲಿ 96,982 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,26,86,049ಕ್ಕೆ ಏರಿಕೆ…

97
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 96,982 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,26,86,049ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 446 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,65,547ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,26,86,049 ಮಂದಿ ಸೋಂಕಿತರ ಪೈಕಿ ಈವರೆಗೆ 1,17,32,279 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.