ದೇಶದ್ರೋಹ ಪ್ರಕರಣ-ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‍ಗೆ ಮರಣದಂಡನೆ…

396
firstsuddi

ಇಸ್ಲಾಮಾಬಾದ್ : ದೇಶದ್ರೋಹ ಆರೋಪಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‍ಗೆ ಪಾಕಿಸ್ತಾನದ ವಿಶೇಷ ನ್ಯಾಯಾಲಯ ಮರಣದಂಡನೆ ನೀಡಿ ಆದೇಶ ಹೊರಡಿಸಿದೆ. ಹೃದಯ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ಅವರು ಸದ್ಯ ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2007ರ ನ.3ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಕ್ಕಾಗಿ ಫರ್ವೇಜ್ ಮುಷರಫ್ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿತ್ತು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ನವೆಂಬರ್ 9ರಂದು ವಿಚಾರಣೆಯನ್ನು ಮುಕ್ತಾಯಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಅದರಂತೆ ಇಂದು ತೀರ್ಪನ್ನು ಪ್ರಕಟಿಸಿದ ಕೋರ್ಟ್ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದೆ.