ದೇಶದ ಏಳು ರಾಜ್ಯದಲ್ಲಿ ಪುಲ್ವಾಮ ಮಾದರಿಯ ದಾಳಿ ನಡೆಸಲು ಸಂಚು ರೂಪಿಸಿರುವ ಉಗ್ರರು; ಗುಪ್ತಚರ ಇಲಾಖೆ ಮಾಹಿತಿ…

814
firstsuddi

ನವದೆಹಲಿ : ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370 ಮತ್ತು 35(ಎ) ವಿಧಿ ರದ್ದು ಮಾಡಿದ ಬೆನ್ನಲ್ಲೇ ಪುಲ್ವಾಮ ದಾಳಿ ಮಾದರಿಯಲ್ಲಿ ಜೈಷ್ ಎ ಮಹಮ್ಮದ್ ಉಗ್ರ ಸಂಘಟನೆಯ ಉಗ್ರರು ಕಾಶ್ಮೀರ ಸೇರಿದಂತೆ ಒಟ್ಟು ಏಳು ರಾಜ್ಯದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಕಾಶ್ಮೀರ, ನವದೆಹಲಿ, ಕರ್ನಾಟಕ, ರಾಜಸ್ಥಾನ, ಪಂಜಾಬ್, ಗುಜರಾತ್ ಹಾಗೂ ಆಂಧ್ರಪ್ರದೇಶದಲ್ಲಿ ಜೈಷ್ ಎ ಮಹಮ್ಮದ್ ಸಂಘಟನೆಯ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದು, ಎಲ್ಲಾ ರಾಜ್ಯಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಮಾಹಿತಿಯ ಪ್ರಕಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಭಯೋತ್ಪಾದಕ ಸಂಘಟನೆಗೆ ದಾಳಿ ನಡೆಸಲು ಸಹಾಯ ಮಾಡುತ್ತಿದ್ದು,  ಫೆಬ್ರವರಿ 14ರಂದು ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಜೆಇಎಂ ಸಂಘಟನೆಯ ಉಗ್ರರು ದಾಳಿ ನಡೆಸಿದ್ದರು. ಅದೇ ಮಾದರಿಯಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎನ್ನಲಾಗಿದ್ದು, ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಇರುವುದರಿಂದ ದೇಶದ ಪ್ರತಿಷ್ಟಿತ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಾಗಿಸಿದ್ದು, ಆಗಸ್ಟ್10 ರಿಂದ 20ರವರೆಗೆ ವಿದೇಶದಿಂದ ಬರುವವರಿಗೆ ನಿರ್ಬಂಧ ಹೇರಲಾಗಿದೆ.