ದೇಶದ ಮೊದಲ ಆ್ಯಪಲ್ ಸ್ಟೋರ್ ಉದ್ಘಾಟಿಸಿದ ಸಿಇಒ ಟಿಮ್ ಕುಕ್.

47
firstsuddi

ಮುಂಬೈ : ಭಾರತದಲ್ಲಿ ಮೊದಲ ಆ್ಯಪಲ್ ಸ್ಟೋರನ್ನು ಇಂದು ನಗರದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟಿಸಲಾಯಿತು.

ಆ್ಯಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಟಿಮ್ ಕುಕ್ ಗ್ರಾಹಕರಿಗೆ ತಮ್ಮ ಭಾರತದ ಮೊದಲ ಚಿಲ್ಲರೆ ಮಳಿಗೆಯ ಬಾಗಿಲು ತೆರೆಯುವ ಮೂಲಕ ಮಳಿಗೆಗೆ ಚಾಲನೆ ನೀಡಿದರು.

ಜಿಯೋ ವರ್ಲ್ಡ್ ಡ್ರೈವ್ ಮಾಲ್‌ನ ಮೂಲೆಯಲ್ಲಿ ಬೃಹತ್ 2 ಅಂತಸ್ತಿನ ಗಾಜಿನಿಂದ ಮಾಡಲಾದ ಸ್ಟೋರ್ ಇದಾಗಿದೆ. ಭಾರತದಲ್ಲಿ ಆನ್‌ಲೈನ್ ಸ್ಟೋರ್‌ಗಳಲ್ಲಿ ಪ್ರಸ್ತುತ ಲಭ್ಯವಿರುವ ಎಲ್ಲಾ ಆ್ಯಪಲ್ ಉತ್ಪನ್ನಗಳು ಇಲ್ಲಿ ದೊರೆಯಲಿದೆ.

ಸ್ಟೋರ್‌ಗೆ ಆಗಮಿಸುವ ಗ್ರಾಹಕರು ಆ್ಯಪಲ್ ಉತ್ಪನ್ನಗಳ ಸಂಪೂರ್ಣ ಮಾಹಿತಿ ಪಡೆಯಬಹುದು. ಈ ಸ್ಟೋರ್‌ಗೆ ಫ್ಯಾಕ್ಟರಿಯಿಂದ ನೇರವಾಗಿ ಉತ್ಪನ್ನಗಳು ಆಗಮಿಸುವುದರಿಂದ ಮಾರುಕಟ್ಟೆಯ ಬೆಲೆಗಿಂತ ಅಗ್ಗದಲ್ಲಿ ಉತ್ಪನ್ನಗಳು ಗ್ರಾಹಕರ ಕೈಗೆಟುಕಲಿದೆ.

ಹೊಸ ಮಳಿಗೆಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಶೇ.50 ರಷ್ಟು ಸಿಬ್ಬಂದಿ ಮಹಿಳೆಯರೇ ಇದ್ದಾರೆ. ಮುಖ್ಯವಾಗಿ ಕಂಪನಿ ಸ್ಥಳೀಯ ಗ್ರಾಹಕರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಭಾರತದ 18 ಭಾಷೆಗಳನ್ನು ಒಳಗೊಂಡಂತೆ 25 ಭಾಷೆಗಳನ್ನು ಮಾತನಾಡಬಲ್ಲ ಸಿಬ್ಬಂದಿಯನ್ನು ನಿಯೋಜಿಸಿದೆ. 2ನೇ ಮಳಿಗೆ ಏಪ್ರಿಲ್ 20ರಂದು ದೆಹಲಿಯಲ್ಲಿ ಆರಂಭಗೊಳ್ಳಲಿದೆ.