ದೇಶದ 49ನೇ ಸಿಜೆಐ ಆಗಿ ಯುಯು ಲಲಿತ್ ಪ್ರಮಾಣವಚನ ಸ್ವೀಕಾರ…

88
firstsuddi

ನವದೆಹಲಿ : ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಿಜೆಐ ಅವರಿಗೆ ಗೌಪ್ಯತೆಯ ಪ್ರಮಾಣ ಬೋಧಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಸಿಜೆಐ ಆಗಿ ನ್ಯಾಯಮೂರ್ತಿ ಎನ್​.ವಿ ರಮಣ ಅವರ ಅವಧಿ ಆಗಸ್ಟ್ 26(ನಿನ್ನೆ) ರಂದು ಕೊನೆಗೊಂಡಿತು. ಯುಯು ಲಲತ್ ಅವರು ಕೇವಲ 74 ದಿನಗಳ ಕಾಲ ಸುಪ್ರೀಂ ಕೋರ್ಟ್ ನ ಮುಖ್ಯಸ್ಥರಾಗಿರುತ್ತಾರೆ.