ಕೊಡಗು: ದೊಣ್ಣೆಯಿಂದ ಹೊಡೆದು ವ್ಯಕ್ತಿಯೊಬ್ಬ ತನ್ನ ತಂದೆಯನ್ನೇ ಕೊಲೆಗೈದಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲದಲ್ಲಿ ನಡೆದಿದೆ.
ಚೇಂದ್ರಿಮಾಡರಾಜ (68) ಕೊಲೆಯಾದ ವ್ಯಕ್ತಿ. ಪುತ್ರ ದರ್ಶನ್ ಕೊಲೆ ಮಾಡಿದ ಆರೋಪಿ. ನಿನ್ನೆ ದರ್ಶನ್, ತನ್ನ ತಂದೆ ಚೇಂದ್ರಿಮಾಡರಾಜ ಅವರಿಗೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಚೇಂದ್ರಿಮಾಡರಾಜನನ್ನು ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನು ಹಣದ ವಿಚಾರವಾಗಿ ತಂದೆ ಮಗನ ನಡುವೆ ಗಲಾಟೆಯಾಗಿದ್ದು, ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ದರ್ಶನ್ನನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.










