ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ. ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಏಪ್ರಿಲ್ 16ರಿಂದ ಮೇ 6 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಜೆ.ಇ.ಇ ಪರೀಕ್ಷೆಗಳು ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ದಿನಾಂಕಗಳು ಒಟ್ಟಿಗೆ ಬಂದಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪಿಯುಸಿ ಬೋರ್ಡ್ ಪರೀಕ್ಷೆಯ ದಿನಾಂಕ ಬದಲಾವಣೆ ಮಾಡಿದೆ.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಏಪ್ರಿಲ್ 22 ರಿಂದ ಪರೀಕ್ಷೆ ಪ್ರಾರಂಭ ಆಗಲಿದ್ದು, ಮೇ 11ಕ್ಕೆ ಪರೀಕ್ಷೆಗಳು ಮುಕ್ತಾಯ ಅಗಲಿದ್ದು, ವಿದ್ಯಾರ್ಥಿಗಳು/ಪೋಷಕರುಗಳಿಂದ ಆಕ್ಷೇಪಣೆಗಳನ್ನು ಸಲ್ಲಿಸಲು ಮಾರ್ಚ್ 5ರ ಸಂಜೆ 5:00 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿ ಹೀಗಿದೆ:
22-4-2022- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
23-4-2022- ಹಿಂದಿ
25-4-2022- ಅರ್ಥಶಾಸ್ತ್ರ
26-4-2022- ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
27-4-2022- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
28-4-2022- ಕನ್ನಡ, ಅರೇಬಿಕ್
30-4-2022- ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
2-5-2022- ಭೂಗೋಳ ಶಾಸ್ತ್ರ, ಜೀವಶಾಸ್ತ್ರ
4-5-2022- ಇಂಗ್ಲಿಷ್
5-5-2022- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
6-5-2022- ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
7-5-2022- ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ,ಐಚ್ಛಿಕ ಕನ್ನಡ
9-5-2022- ಇತಿಹಾಸ, ಭೌತಶಾಸ್ತ್ರ
11-5-2022- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ










