ತುಮಕೂರು : ಕೊರೊನಾ ಭೀತಿ ಹಿನ್ನಲೆ ಈ ವರ್ಷ ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಸಂತಸಗೊಂಡಿರುವ ವಿದ್ಯಾರ್ಥಿಗಳು ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದಾರೆ ಎಂದು ಜಿಲ್ಲೆಯ ತಿಪಟೂರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗೇಟ್ ಮುಂದೆ ಬೂದುಗುಂಬಳ ಕಾಯಿ, ತೆಂಗಿನ ಕಾಯಿಯನ್ನು ಒಡೆದು, ಪಟಾಕಿ ಸಿಡಿಸಿ, ಸಂಭ್ರಮಾಚರಣೆಯನ್ನು ಮಾಡಿದ್ದಾರೆ. ಸಂಭ್ರಮಾಚರಣೆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಜಯಕಾರ ಹಾಕಿದ್ದಾರೆ.
ಸರ್ಕಾರದ ನಿರ್ಧಾರ ಪ್ರಕಟವಾದ ದಿನದಂದು ಲಾಕ್ ಡೌನ್ ಇದ್ದ ಕಾರಣ ಯಾರೂ ಹೊರಗೆ ಬರದಂತಾಗಿತ್ತು. ಆದರೆ ನಿನ್ನೆ ಲಾಕ್ ಡೌನ್ ಸಡಿಲಿಕೆ ಆದ ಕಾರಣ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಎದುರು ಸಂಭ್ರಮಿಸಿದ್ದಾರೆ. ವಿದ್ಯಾರ್ಥಿಗಳ ಸಂಭ್ರಮಾಚರಣೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.










