ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಉಚಿತ ಬಸ್ ಪ್ರಯಾಣಕ್ಕೆ ಅವಕಾಶ…

63
firstsuddi

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ ಆರ್ ಟಿಸಿ)ವು ದ್ವಿತೀಯ ಪಿಯುಸಿ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಕೆಎಸ್ ಆರ್ ಟಿಸಿಗೆ ಪತ್ರ ಬರೆದು ಉಚಿತ ಬಸ್ ವ್ಯವಸ್ಥೆ ಮಾಡುವಂತೆ ಕೋರಿದ್ದರು. ಈ ನಿಟ್ಟಿನಲ್ಲಿ ನಿಗಮ ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆದೇಶ ಹೊರಡಿಸಿದೆ.

ಮಾರ್ಚ್ 9ರಿಂದ 29ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ತೆರಳುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣದ ಸೌಲಭ್ಯ ಪಡೆಯಬಹುದಾಗಿದೆ. ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ನಿಗಮ ತಿಳಿಸಿದೆ.