ದ.ಕ. ಜಿಲ್ಲಾಧಿಕಾರಿ ಸಿಂಧು ರೂಪೇಶ್ ಅಧಿಕಾರ ಸ್ವೀಕಾರ…

250
firstsuddi

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ಅವರು ಶನಿವಾರ ಮಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಿದರು. ಪರ ಜಿಲ್ಲಾಧಿಕಾರಿ ರೂಪಾ ನೂತನ ಜಿಲ್ಲಾಧಿಕಾರಿಗಳನ್ನು ಸ್ವಾಗತಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ತಹಶೀಲ್ದಾರ್ ಗುರುಪ್ರಸಾದ್ ಉಪಸ್ಥಿತರಿದ್ದರು. ಸಿಂಧು ಅವರು ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಮಹಿಳಾ ಜಿಲ್ಲಾಧಿಕಾರಿ. ಈ ಹಿಂದೆ, 1989 ರಲ್ಲಿ ರಂಜನಿ ಶ್ರೀಕುಮಾರ್ ಅವರು ಅವಿಭಜಿತ ದ.ಕ. ಜಿಲ್ಲೆಯ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿದ್ದರು. ಸಿಂದು ಬಿ. ರೂಪೇಶ್ ಅವರು ದ.ಕ. ಜಿಲ್ಲೆಯ 129 ನೇ ಜಿಲ್ಲಾಧಿಕಾರಿ. ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳೆರಡೂ ಹುದ್ದೆಗಳಲ್ಲಿ ಮಹಿಳೆಯರಿರುವುದು ವಿಶೇಷ.