ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ –ಕೋಟ ಶ್ರೀನಿವಾಸ ಪೂಜಾರಿ.

79
firstsuddi

ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.

ಝರಾಕ್ಸ್, ಜವಳಿ, ಚಪ್ಪಲಿ ಸೇರಿದಂತೆ ಇತರ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ ಕಾರಣ ನಾಳ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದೂ ಮುಖ್ಯಮಂತ್ರಿ ಸೂಚನೆ ನೀಡಿದ್ದು, ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.