ಬೆಂಗಳೂರು : ನಗರದ ಸೌಥ್ ಇಂಡಿಯನ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ, ಮಾಲ್ ಹೊತ್ತಿ ಉರಿದಿದೆ.
ಇಂದು ನುಸಕಿನ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮಾಲ್ ಗೆ ಆವರಿಸಿ ಹೊತ್ತಿ ಉರಿದಿದೆ. ಮಾಲ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು, ಗೃಹಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಏಳು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ . ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಾಲ್ ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.










