ಧರ್ಮಸ್ಥಳ, ಕುಕ್ಕೆ, ತಿರುಪತಿ, ಮಂತ್ರಾಲಯಕ್ಕೆ ಪ್ಯಾಕೇಜ್ ಟ್ರಿಪ್…

106
firstsuddi

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸಿದ್ದಾರೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಭಿವೃದ್ಧಿ ಪಡಿಸಲು ಬಜೆಟ್ ನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.

* ರಾಜ್ಯದಿಂದ ಕಾಶಿ ಯಾತ್ರೆಯನ್ನು ಕೈಗೊಳ್ಳುವ ಸುಮಾರು 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ಸಹಾಯಧನ. ತಲಾ 5,000 ರೂ.ಗಳ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ಮರವತ್ತೂರು ಇನ್ನಿತರ ಸ್ಥಳಗಳಿಗೆ ಪ್ಯಾಕೇಜ್ ಟ್ರಿಪ್ ಸೇವೆ.

*ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಕೆ.ಎಸ್.ಟಿ.ಡಿ.ಸಿ.ವತಿಯಿಂದ ಕಾರ್ಯಕ್ರಮ ಜಾರಿ. ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ. ಮೊದಲ ಹಂತದ ಕಾಮಗಾರಿಗೆ 45 ಕೋಟಿ ರೂ. ಅನುದಾನ.

*ರಾಜ್ಯದ ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಲು “Adopt a Monument* ಯೋಜನೆ ಜಾರಿ.

* ಹಂಪಿ-ಬಾದಾಮಿ-ಐಹೊಳೆ-ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ ಹಾಗೂ ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು ಹಳೇಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ.

* ಬೇಲೂರು, ಹಳೇಬೀಡು, ಸೋಮನಾಥಪುರ ಒಳಗೊಂಡಂತೆ ಹೊಯ್ಸಳರ ಸ್ಮಾರಕಗಳನ್ನು ಪ್ರಸಕ್ತ ಸಾಲಿನಲ್ಲಿ ಯುನೆಸ್ಕೊ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿಸಲು ಕ್ರಮ.

* ಜೋಗ ಜಲಪಾತದಲ್ಲಿ 116 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೋಟೆಲ್ ಹಾಗೂ ರೋಪ್ವೇ ಅಭಿವೃದ್ಧಿ. ನಂದಿ ಬೆಟ್ಟದಲ್ಲಿ 93 ಕೋಟಿ ರೂ.ವೆಚ್ಚದಲ್ಲಿ ರೋಪ್ವೇ ನಿರ್ಮಾಣಕ್ಕೆ ಅನುಮೋದನೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ರೋಪ್ವೇ ನಿರ್ಮಾಣಕ್ಕೆ ಕ್ರಮ.

* ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ವೆಚ್ಚದಲ್ಲಿ ಯೋಜನೆ. ಪರ್ವತ ಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಹಾಗೂ ಮುಳ್ಳಯ್ಯನಗಿರಿ ದತ್ತಪೀಠಗಳಲ್ಲಿ ರೋಪ್ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ.

* ಕರಾವಳಿ ಭಾಗದ ಜಲ ಮೂಲಗಳಲ್ಲಿನ ಪ್ಲಾಸ್ಟಿಕ್ ಮಾಲಿನ್ಯ ನಿವಾರಿಸಲು 840 ಕೋಟಿ ರೂ. ವೆಚ್ಚದ ವಿನೂತನ ಎಸ್ಪಿ ನಿರ್ವಹಣೆ ಯೋಜನೆ ಜಾರಿ. ಖಾಸಗಿ ಭೂಮಿಗಳಲ್ಲಿ ಶ್ರೀಗಂಧ ಮರ ಬೆಳೆಸಲು ಉತ್ತೇಜನ ನೀಡಲು ಶ್ರೀಗಂಧ ನೀತಿ ಅನುಷ್ಠಾನ.

* ಕಡಲತೀರದ ಪ್ರವಾಸೋದ್ಯಮ ಉತ್ತೇಜನಕ್ಕೆ ಮಾನದಂಡಗಳನ್ನು ಸಡಿಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅನುಮೋದನೆ ಪಡೆಯಲು ಕ್ರಮ. ತದಡಿ ಬಂದರಿನಲ್ಲಿ ಸಮಗ್ರ ಪರಿಸರ ಪ್ರವಾಸೋದ್ಯಮ ಕೇಂದ್ರ ಅಭಿವೃದ್ಧಿ.

* ಪಾರಂಪರಿಕ ಪ್ರವಾಸಿ ತಾಣಗಳಾದ ಬೀದರ್ ಹಾಗೂ ಕಲಬುರಗಿ ಕೋಟೆಗಳ ಪುನರುಜೀವನಕ್ಕೆ ಕ್ರಮ.