ಧಾರಾಕಾರ ಮಳೆ – ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಭೂ ಕುಸಿತ…

56
firstsuddi

ಮೈಸೂರು : ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ನಗರದ  ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿದೆ.

ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂ ಕುಸಿತವಾಗಿದೆ. ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಈ ರಸ್ತೆಯಲ್ಲಿ ಸಾರ್ವಜನಿಕರು, ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಎರಡು ವರ್ಷಗಳ ಹಿಂದೆಯೂ ಇದೇ ರಸ್ತೆಯಲ್ಲಿ ಭೂ ಕುಸಿತ ಉಂಟಾಗಿತ್ತು. ನಗರದಲ್ಲಿ ಭಾರೀ ಮಳೆ ಆಗಿದ್ದು, ಕಳೆದ 10 ದಿನಗಳಿಗೆ ಹೋಲಿಸಿದರೆ ನಿನ್ನೆ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ.